Luke 9:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಶಿಷ್ಯರು, “ಕೆಲವು ಜನರು ನಿನ್ನನ್ನು ‘ಸ್ನಾನಿಕನಾದ ಯೋಹಾನ’ ಎನ್ನುತ್ತಾರೆ. ಇನ್ನು ಕೆಲವರು, ‘ಎಲೀಯ’ ಎನ್ನುತ್ತಾರೆ. ಮತ್ತೆ ಕೆಲವರು, ‘ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಜೀವಂತವಾಗಿ ಎದ್ದುಬಂದಿದ್ದಾನೆ’ ಎನ್ನುತ್ತಾರೆ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, “ನಿನ್ನನ್ನು ಸ್ನಾನಿಕನಾದ ಯೋಹಾನನು ಎಂದೂ, ಕೆಲವರು ಎಲೀಯನು ಎಂದೂ, ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆ ಎಂದು ಅನ್ನುತ್ತಿದ್ದಾರೆ” ಎಂದು ಹೇಳಿದರು.
Kannada BSI Bible 2016
ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.