Luke 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.
Kannada BSI Bible 2016
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,\ ಎಂದು ಅವರಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.