Luke 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ತನ್ನ ಮಾತನ್ನು ಮುಂದುವರಿಸಿ ಅವರೆಲ್ಲರಿಗೆ ಹೇಳಿದ್ದೇನೆಂದರೆ: “ನನ್ನ ಹಿಂಬಾಲಕನಾಗಬಯಸುವವನು ತನ್ನನ್ನು ನಿರಾಕರಿಸಿ, ಪ್ರತಿದಿನ ತನ್ನ ಶಿಲುಬೆಯನ್ನು (ತನಗಾಗುವ ಹಿಂಸೆಯನ್ನು) ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada BSI Bible 2016
ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ದಿನಾಲೂ ಹೊತ್ತುಕೊಂಡು ನನ್ನ ಹಿಂದೆ ಬರಲಿ.
Kannada Bible (KNCL) BSI 2016
ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.