Luke 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ಇಡೀ ಲೋಕವನ್ನೇ ಸಂಪಾದಿಸಿಕೊಂಡು, ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅದರಿಂದ ಅವನಿಗೆ ಲಾಭವೇನು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Kannada BSI Bible 2016
ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
Kannada Bible (KNCL) BSI 2016
ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?