Luke 9:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಾವನಾದರೂ ನನಗೂ ನನ್ನ ಉಪದೇಶಕ್ಕೂ ನಾಚಿಕೊಳ್ಳುವುದಾದರೆ, ನಾನು ನನ್ನ ಮಹಿಮೆಯೊಡನೆ, ತಂದೆಯ ಮಹಿಮೆಯೊಡನೆ ಮತ್ತು ಪರಿಶುದ್ಧ ದೂತರ ಮಹಿಮೆಯೊಡನೆ ಬಂದಾಗ ಅವನ ವಿಷಯದಲ್ಲಿ ನಾಚಿಕೊಳ್ಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ, ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಮಹಾಪ್ರಭಾವದೊಡನೆ ಬರುವಾಗ ಅವನ ಕುರಿತು ನಾಚಿಕೊಳ್ಳುವನು.
Kannada BSI Bible 2016
ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.
Kannada Bible (KNCL) BSI 2016
ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.