Luke 9:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
Kannada BSI Bible 2016
ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ, ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು.
Kannada Bible (KNCL) BSI 2016
ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.