Luke 9:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾಢನಿದ್ರೆಯಲ್ಲಿದ್ದ ಪೇತ್ರ ಮತ್ತು ಇತರರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಯೇಸುವಿನೊಡನೆ ನಿಂತಿದ್ದ ಅವರಿಬ್ಬರನ್ನೂ ಕಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
Kannada BSI Bible 2016
ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.
Kannada Bible (KNCL) BSI 2016
ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.