Luke 9:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ ಮತ್ತು ಎಲೀಯ ಆತನನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು. ಇಲ್ಲಿ ನಾವು ಮೂರು ಗುಡಾರಗಳನ್ನು ಹಾಕುತ್ತೇವೆ. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು” ಎಂದು ಹೇಳಿದನು. (ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದು ತಿಳಿಯಲಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೇಸುವನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ, “ಗುರುವೇ ನಾವು ಇಲ್ಲೇ ಇರುವುದು ಒಳ್ಳೆಯದು, ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು ಎಲೀಯನಿಗೊಂದು ಹಾಗೂ ಮೋಶೆಗೊಂದು” ಎಂದು ಹೇಳಿದನು. ತಾನು ಏನು ಹೇಳುತ್ತಿದ್ದೇನೆಂದು ತನಗೇ ಗೊತ್ತಾಗಲಿಲ್ಲ.
Kannada BSI Bible 2016
ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಆತನನ್ನು ಬಿಟ್ಟುಹೋಗುತ್ತಿರುವಾಗ ಪೇತ್ರನು ಯೇಸುವಿಗೆ - ಗುರುವೇ ನಾವು ಇಲ್ಲೇ ಇರುವದು ಒಳ್ಳೇದು, ಮೂರು ಪರ್ಣಶಾಲೆಗಳನ್ನು ಕಟ್ಟುವೆವು; ನಿನಗೊಂದು ಮೋಶೆಗೊಂದು ಎಲೀಯನಿಗೊಂದು ಎಂದು ಹೇಳಿದನು. ತಾನಂದದ್ದು ತನಗೇ ಗೊತ್ತಾಗಲಿಲ್ಲ.
Kannada Bible (KNCL) BSI 2016
ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.