Luke 9:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೇತ್ರನು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಮೋಡವು ಬಂದು ಅವರ ಸುತ್ತಲೂ ಆವರಿಸಿತು. ಆಗ ಪೇತ್ರ, ಯಾಕೋಬ ಮತ್ತು ಯೋಹಾನನಿಗೆ ಭಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡವು ಅವರನ್ನು ಆವರಿಸಿಕೊಂಡಾಗ ಅವರು ಹೆದರಿದರು.
Kannada BSI Bible 2016
ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇದನ್ನು ಹೇಳುತ್ತಿರುವಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಅವರು ಮೋಡದೊಳಗೆ ಸೇರಿದಾಗ ಹೆದರಿದರು.
Kannada Bible (KNCL) BSI 2016
ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.