Luke 9:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನನ್ನು ದೆವ್ವಹಿಡಿಯುತ್ತದೆ, ಹಿಡಿಯುತ್ತಲೇ ಕೂಗಿಕೊಳ್ಳುತ್ತಾನೆ. ಅದು ಬಾಯಲ್ಲಿ ನೊರೆ ಬರುವಷ್ಟು ಇವನನ್ನು ಒದ್ದಾಡಿಸುತ್ತದೆ ಮತ್ತು ಬಹು ಕಷ್ಟಕೊಟ್ಟು ತೊಂದರೆಪಡಿಸಿದ ಹೊರತು ಬಿಟ್ಟುಬಿಡುವುದಿಲ್ಲ.
Kannada BSI Bible 2016
ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಯಲ್ಲಿ ನೊರೆ ಬರುವಷ್ಟು ಅವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ಜಜ್ಜಿದ ಹೊರತು ಬಿಡುವದಿಲ್ಲ.
Kannada Bible (KNCL) BSI 2016
ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.