Luke 9:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.
Kannada BSI Bible 2016
ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
Kannada Bible (KNCL) BSI 2016
ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.