Luke 9:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹುಡುಗನು ಬರುತ್ತಿದ್ದಾಗ, ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿತು. ಹುಡುಗನು ತನ್ನ ಸ್ವಾಧೀನ ಕಳೆದುಕೊಂಡನು. ಆಗ ಯೇಸು ದೆವ್ವವನ್ನು ಗದರಿಸಿ ಆ ಹುಡುಗನನ್ನು ಗುಣಪಡಿಸಿದನು. ಬಳಿಕ ಅವನನ್ನು ಅವನ ತಂದೆಗೆ ಒಪ್ಪಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗನು ಇನ್ನೂ ಬರುತ್ತಿರುವಾಗಲೇ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಗೆ ಒಪ್ಪಿಸಿದನು.
Kannada BSI Bible 2016
ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.
Kannada Bible (KNCL) BSI 2016
ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.