Luke 9:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
Kannada BSI Bible 2016
ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.
Kannada Bible (KNCL) BSI 2016
ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,