Luke 9:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
Kannada BSI Bible 2016
ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
Kannada Bible (KNCL) BSI 2016
“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.