Luke 9:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೇಸುವಿನ ಈ ಮಾತುಗಳು ಶಿಷ್ಯರಿಗೆ ಅರ್ಥವಾಗಲಿಲ್ಲ. ಏಕೆಂದರೆ ಅವುಗಳ ಅರ್ಥವು ಅವರಿಗೆ ಮರೆಯಾಗಿತ್ತು. ಆದರೂ ಯೇಸು ಹೇಳಿದ್ದರ ಬಗ್ಗೆ ಆತನನ್ನು ಕೇಳುವದಕ್ಕೆ ಶಿಷ್ಯರು ಭಯಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.
Kannada BSI Bible 2016
ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಈ ಮಾತನ್ನು ಗ್ರಹಿಸಲಿಲ್ಲ; ಅದು ಅವರಿಗೆ ಮರೆಯಾದದರಿಂದ ಅದರ ಅರ್ಥವನ್ನು ಅವರು ತಿಳಿಯದೆಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವದಕ್ಕೆ ಅಂಜಿದರು.
Kannada Bible (KNCL) BSI 2016
ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.