Luke 9:48 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ತನ್ನ ಶಿಷ್ಯರಿಗೆ, “ಒಬ್ಬನು ನನ್ನ ಹೆಸರಿನಲ್ಲಿ ಒಂದು ಚಿಕ್ಕ ಮಗುವನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನೇ ಸ್ವೀಕರಿಸಿಕೊಂಡಂತಾಯಿತು. ಒಬ್ಬನು ನನ್ನನ್ನು ಸ್ವೀಕರಿಸಿಕೊಂಡರೆ ಅವನು ನನ್ನನ್ನು ಕಳುಹಿಸಿದಾತನನ್ನೇ (ದೇವರನ್ನು) ಸ್ವೀಕರಿಸಿಕೊಂಡಂತಾಯಿತು. ನಿಮ್ಮಲ್ಲಿ ಯಾವನು ದೀನನಾಗಿದ್ದಾನೋ ಅವನೇ ನಿಮ್ಮಲ್ಲಿ ಪ್ರಮುಖನಾಗಿದ್ದಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು” ಎಂದು ಹೇಳಿದನು.
Kannada BSI Bible 2016
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು; ಯಾಕಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು ಎಂದು ಹೇಳಿದನು.
Kannada Bible (KNCL) BSI 2016
“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.