Luke 9:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಹಾನನು, “ಗುರುವೇ, ನಿನ್ನ ಹೆಸರಿನ ಮೂಲಕ ಜನರಿಂದ ದೆವ್ವಗಳನ್ನು ಬಿಡಿಸುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ನೋಡಿದೆವು. ಅವನು ನಮ್ಮವನಲ್ಲದ ಕಾರಣ ನಿನ್ನ ಹೆಸರನ್ನು ಬಳಸಕೂಡದೆಂದು ಅವನಿಗೆ ಹೇಳಿದೆವು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,
Kannada BSI Bible 2016
ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೋಹಾನನು - ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು ಅನ್ನಲು
Kannada Bible (KNCL) BSI 2016
ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.