Luke 9:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
Kannada BSI Bible 2016
ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.
Kannada Bible (KNCL) BSI 2016
ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.