Luke 9:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.
Kannada BSI Bible 2016
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು
Kannada Bible (KNCL) BSI 2016
ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು