Luke 9:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.
Kannada BSI Bible 2016
ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ ಮತ್ತು ಆಕಾಶದ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆ ಇಡುವಷ್ಟೂ ಸ್ಥಳವಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.
Kannada Bible (KNCL) BSI 2016
ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.