Luke 9:59 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಇನೊಬ್ಬನಿಗೆ, “ನನ್ನನ್ನು ಹಿಂಬಾಲಿಸು!” ಎಂದನು. ಆದರೆ ಅವನು, “ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಅಂತ್ಯಕ್ರಿಯೆಯನ್ನು ಮಾಡಲು ಅವಕಾಶ ನೀಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು” ಎಂದು ಹೇಳಲು ಅವನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅಂದನು.
Kannada BSI Bible 2016
ಇದಲ್ಲದೆ ಆತನು ಮತ್ತೊಬ್ಬನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆದರೆ ಅವನು--ಕರ್ತನೇ, ನಾನು ಹೋಗಿ ಮೊದಲು ನನ್ನ ತಂದೆಯನ್ನು ಹೂಣಿಡುವಂತೆ ಅಪ್ಪಣೆಕೊಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮತ್ತೊಬ್ಬನಿಗೆ - ನನ್ನನ್ನು ಹಿಂಬಾಲಿಸು ಎಂದು ಹೇಳಲು ಅವನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅಂದನು.
Kannada Bible (KNCL) BSI 2016
ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.