Luke 9:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಪೊಸ್ತಲರು ಹೊರಟು ಊರೂರುಗಳಿಗೆ ಹೋಗಿ, ಎಲ್ಲೆಲ್ಲೂ ಸುವಾರ್ತೆಯನ್ನು ಸಾರಿದರು ಮತ್ತು ರೋಗಿಗಳನ್ನು ವಾಸಿಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಹೊರಟು ಗ್ರಾಮಗಳಿಗೆ ಹೋಗಿ, ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿಯೂ ರೋಗಿಗಳನ್ನು ವಾಸಿಮಾಡುತ್ತಿದ್ದರು.
Kannada BSI Bible 2016
ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.
Kannada Bible (KNCL) BSI 2016
ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.