Luke 9:61 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮತ್ತೊಬ್ಬನು, “ಸ್ವಾಮೀ, ನಾನು ನಿನ್ನನ್ನು ಹಿಂಬಾಲಿಸುವೆನು. ಆದರೆ ಮೊದಲು ನನ್ನ ಕುಟುಂಬದವರ ಬಳಿಗೆ ಹೋಗಿಬರಲು ಅವಕಾಶ ನೀಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.
Kannada BSI Bible 2016
ಇದಲ್ಲದೆ ಮತ್ತೊಬ್ಬನು ಸಹ--ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುವೆನು; ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರಿಗೆ ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡು ಅಂದನು.ಆಗ ಯೇಸು ಅವನಿಗೆ--ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ತಕ್ಕವನಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಬ್ಬನು ಸಹ - ಸ್ವಾಮೀ, ನಿನ್ನನ್ನು ಹಿಂಬಾಲಿಸುತ್ತೇನೆ; ಆದರೆ ಮೊದಲು ನನ್ನ ಮನೆಯವರಿಗೆ ಹೇಳಿಬರುವದಕ್ಕೆ ನನಗೆ ಅಪ್ಪಣೆಯಾಗಬೇಕು ಅಂದನು.
Kannada Bible (KNCL) BSI 2016
ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.