Luke 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಕೆಲವರು, “ಎಲೀಯನು ನಮ್ಮ ಬಳಿಗೆ ಬಂದಿದ್ದಾನೆ” ಎಂದು ಹೇಳುತ್ತಿದ್ದರು. ಮತ್ತೆ ಕೆಲವರು, “ಪೂರ್ವಕಾಲದ ಪ್ರವಾದಿಗಳಲ್ಲೊಬ್ಬನು ಜೀವಂತವಾಗಿ ಎದ್ದಿದ್ದಾನೆ” ಎಂದು ಹೇಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾರೋ ಒಬ್ಬನು ಜೀವದಿಂದ ಎದ್ದಿದ್ದಾನೆಂದು ಮತ್ತೆ ಕೆಲವರೂ ಹೇಳಿಕೊಳ್ಳುತ್ತಿದ್ದರು.
Kannada BSI Bible 2016
ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯನು ಕಾಣಿಸಿಕೊಂಡನೆಂದು ಕೆಲವರೂ, ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆಂದು ಕೆಲವರೂ ಹೇಳಿಕೊಳ್ಳುತ್ತಿದ್ದರು.
Kannada Bible (KNCL) BSI 2016
‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.