Malachi 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಆ ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಆ ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
Kannada BSI Bible 2016
ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.
Kannada Bible (KNCL) BSI 2016
ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.