Malachi 1:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
Kannada BSI Bible 2016
ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,
Kannada Bible (KNCL) BSI 2016
“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.