Malachi 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
Kannada BSI Bible 2016
ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.
Kannada Bible (KNCL) BSI 2016
ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.