Malachi 1:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವ ಕೊಟ್ಟಿಲ್ಲ” ಎಂದು ಕೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
Kannada BSI Bible 2016
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.
Kannada Bible (KNCL) BSI 2016
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”