Malachi 2:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ?
Kannada BSI Bible 2016
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?
Kannada Bible (KNCL) BSI 2016
ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?