Malachi 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು.
Kannada BSI Bible 2016
ಇದನ್ನು ಮಾಡುವ ಮನುಷ್ಯನನ್ನು ಅಂದರೆ, ಯಜಮಾನನನ್ನು ಜ್ಞಾನಿಯನ್ನು ಸೈನ್ಯಗಳ ಕರ್ತನಿಗೆ ಕಾಣಿಕೆ ಅರ್ಪಿಸುವ ವನನ್ನು ಕರ್ತನು ಯಾಕೋಬಿನ ಗುಡಾರಗಳೊಳಗಿಂದ ತೆಗೆದುಬಿಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.
Kannada Bible (KNCL) BSI 2016
ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.