Malachi 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
Kannada BSI Bible 2016
ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.
Kannada Bible (KNCL) BSI 2016
ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.