Malachi 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ. “ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು. ಅವರೇ ಆತನಿಗೆ ಇಷ್ಟ. ನ್ಯಾಯತೀರಿಸುವ ದೇವರು ಎಲ್ಲಿದ್ದಾನೆ?” ಎಂದು ನೀವು ಕೇಳುವುದರಿಂದ ಆತನ ಗಮನದಲ್ಲಿ ಇದ್ದೀರಿ.
Kannada BSI Bible 2016
ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯೆಹೋವನನ್ನು ನಿಮ್ಮ ಮಾತುಗಳಿಂದ ಬೇಸರಗೊಳಿಸಿದ್ದೀರಿ; ಯಾವ ವಿಷಯದಲ್ಲಿ ಆತನನ್ನು ಬೇಸರಗೊಳಿಸಿದ್ದೇವೆ ಅನ್ನುತ್ತೀರಾ? ಪ್ರತಿಯೊಬ್ಬ ದುರಾಚಾರಿಯು ಯೆಹೋವನ ದೃಷ್ಟಿಗೆ ಒಳ್ಳೆಯವನು, ಅವರೇ ಆತನಿಗೆ ಇಷ್ಟ, ನ್ಯಾಯತೀರಿಸುವ ದೇವರು ಎಲ್ಲಿಯೋ ಎಂದು ನೀವು ಅಂದುಕೊಳ್ಳುವದರಲ್ಲಿಯೇ.
Kannada Bible (KNCL) BSI 2016
“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”