Malachi 2:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿ ಕಳುಹಿಸಿದ್ದೇನೆಂಬದು ನಿಮಗೆ ಗೊತ್ತಾಗುವದು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.