Malachi 2:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲೇವಿಯು ಸುಳ್ಳನ್ನು ಸಮರ್ಥಿಸದೆ ಸತ್ಯ ಬೋಧನೆಯನ್ನು ಬೋಧಿಸಿದನು. ಅವನು ಪ್ರಮಾಣಿಕನಾಗಿದ್ದು ಸಮಾಧಾನವನ್ನು ಪ್ರೀತಿಸುತ್ತಿದ್ದನು. ಲೇವಿಯು ನನಗೆ ವಿಧೇಯನಾಗಿದ್ದು ಎಷ್ಟೋ ಮಂದಿ ಕೆಟ್ಟದಾರಿಯಲ್ಲಿ ಹೋಗುತ್ತಿರುವವರನ್ನು ನನ್ನ ಶಿಕ್ಷೆಯಿಂದ ಪಾರುಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
Kannada BSI Bible 2016
ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅನ್ಯಾಯವೇನೂ ಕಾಣಲಿಲ್ಲ; ಅವರು ಶಾಂತಿಯಿಂದಲೂ ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹುಜನರನ್ನು ಪಾಪದ ಕಡೆಯಿಂದ ತಿರುಗಿಸಿದರು.
Kannada Bible (KNCL) BSI 2016
ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು.