Malachi 2:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
Kannada BSI Bible 2016
ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು.
Kannada Bible (KNCL) BSI 2016
ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.