Malachi 2:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.