Malachi 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನೀವು ಈ ಪರೀಕ್ಷೆ ಮಾಡಿನೋಡಿ. ನಿಮ್ಮ ವಸ್ತುಗಳ ಹತ್ತನೇ ಒಂದು ಅಂಶವನ್ನು ನನಗೆ ತೆಗೆದುಕೊಂಡು ಬನ್ನಿರಿ. ಅವುಗಳನ್ನು ಆಲಯದ ಬಂಡಾರದೊಳಗೆ ಹಾಕಿರಿ. ನನ್ನ ಮನೆಗೆ ನೀವು ಆಹಾರ ವಸ್ತುಗಳನ್ನು ತನ್ನಿರಿ. ನನ್ನನ್ನು ಪರೀಕ್ಷಿಸಿರಿ. ನೀವು ಹೀಗೆ ಮಾಡುವುದಾದರೆ ಖಂಡಿತವಾಗಿಯೂ ನಾನು ನಿಮ್ಮನ್ನು ಆಶೀರ್ವದಿಸುವೆನು. ಆಕಾಶದಿಂದ ಮಳೆ ಸುರಿಯುವ ಹಾಗೆ ನಿಮಗೆ ಶುಭವು ಸುರಿಯುವವು. ನಿಮ್ಮ ಮನೆಯಲ್ಲಿ ಬೇಕಾಗಿರುವದಕ್ಕಿಂತ ಹೆಚ್ಚು ಯಾವಾಗಲೂ ಇರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
Kannada BSI Bible 2016
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.