Malachi 3:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.