Malachi 3:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇತರ ಜನಾಂಗಗಳವರು ನಿಮ್ಮೊಂದಿಗೆ ಸಮಾಧಾನದಿಂದಿರುವರು. ನಿಜವಾಗಿಯೂ ನಿಮ್ಮ ದೇಶವು ಆಗ ಆಶ್ಚರ್ಯಕರವಾದ ದೇಶವಾಗಿರುವುದು.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.