Malachi 3:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ, “ನೀವು ನನಗೆ ವಿರುದ್ಧವಾಗಿ ಹೇಯ ಮಾತುಗಳನ್ನಾಡಿದಿರಿ.” ಅದಕ್ಕೆ ನೀವು “ನಿನ್ನ ವಿರುದ್ಧವಾಗಿ ಏನು ಹೇಳಿದ್ದೇವೆ?” ಎಂದು ಕೇಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
Kannada BSI Bible 2016
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹು ಕಠಿನ ಎಂದು ಯೆಹೋವನು ಅನ್ನುತ್ತಾನೆ. ನಿನಗೆ ವಿರುದ್ಧವಾಗಿ ಏನು ಮಾತಾಡಿದ್ದೇವೆ ಅನ್ನುತ್ತೀರಾ?
Kannada Bible (KNCL) BSI 2016
“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”