Malachi 3:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು, “ದೇವರಾದ ಯೆಹೋವನನ್ನು ಆರಾಧಿಸುವುದು ನಿಷ್ಪ್ರಯೋಜಕ. ಆತನ ಕಟ್ಟಳೆಗಳನ್ನು ನಾವು ಅನುಸರಿಸಿದೆವು. ಆದರೆ ಅದರಲ್ಲಿ ನಮಗೇನೂ ಲಾಭವಾಗಲಿಲ್ಲ. ಸಮಾಧಿಯಲ್ಲಿ ಜನರು ರೋದಿಸುವ ಹಾಗೆ ನಮ್ಮ ಪಾಪಗಳಿಗಾಗಿ ನಾವು ರೋದಿಸಿದೆವು. ಆದರೆ ಅದರಿಂದ ನಮಗೇನೂ ಸಹಾಯವಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
Kannada BSI Bible 2016
ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು - ದೇವರನ್ನು ಸೇವಿಸುವದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದರಿಂದ ಆದ ಲಾಭವೇನು;
Kannada Bible (KNCL) BSI 2016
ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,