Malachi 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
Kannada BSI Bible 2016
ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.
Kannada Bible (KNCL) BSI 2016
ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.