Malachi 3:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಸಮಯಕ್ಕಾಗಿ ಯಾರೂ ಸಿದ್ಧಮಾಡಿಕೊಳ್ಳಲಾರರು. ಯಾರೂ ಆತನು ಬರುವಾಗ ಆತನಿಗೆ ವಿರುದ್ಧವಾಗಿ ನಿಲ್ಲರು. ಆತನು ಸುಡುವ ಬೆಂಕಿಯಾಗಿರುವನು. ಆತನು ಶಕ್ತಿಯುತವಾದ ಸಾಬೂನಿನಂತೆ ಕೊಳೆಯನ್ನು ಹೋಗಲಾಡಿಸಿ ಶುದ್ಧಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
Kannada BSI Bible 2016
ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;
Kannada Bible (KNCL) BSI 2016
“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.