Malachi 3:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೆರುಸಲೇಮಿನಿಂದಲೂ ಯೆಹೂದದಿಂದಲೂ ಯೆಹೋವನು ಕಾಣಿಕೆಗಳನ್ನು ಸ್ವೀಕರಿಸುವನು. ಹಿಂದಿನ ಕಾಲದಲ್ಲಿದ್ದಂತೆಯೇ ಈಗಲೂ ಆಗುವದು. ಬಹಳ ವರ್ಷಗಳ ಹಿಂದಿನ ಕಥೆಯೇ ಈಗಲೂ ಆಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
Kannada BSI Bible 2016
ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೂದದ ಮತ್ತು ಯೆರೂಸಲೇವಿುನ ನೈವೇದ್ಯವು ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾಗಿದ್ದಂತೆ ಆಗಿರುವದು.
Kannada Bible (KNCL) BSI 2016
ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.