Malachi 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಂದ ಕದ್ದುಕೊಳ್ಳುವದನ್ನು ನಿಲ್ಲಿಸಿರಿ. ಮನುಷ್ಯನು ದೇವರಿಂದ ಕದ್ದುಕೊಳ್ಳಬಾರದು. ಆದರೆ ನೀವು ನನ್ನಿಂದ ಕದ್ದುಕೊಂಡಿದ್ದೀರಿ. “ನಿನ್ನಿಂದ ಏನು ಕದ್ದುಕೊಂಡಿದ್ದೇವೆ” ಎಂದು ಕೇಳುತ್ತೀರಾ? “ನಿಮ್ಮ ದಶಮ ಭಾಗವನ್ನು ನೀವು ನನಗೆ ಅರ್ಪಿಸಬೇಕಿತ್ತು. ವಿಶೇಷ ಕಾಣಿಕೆಗಳನ್ನು ನೀವು ನನಗೆ ಕೊಡಬೇಕಾಗಿತ್ತು. ಆದರೆ ನೀವು ಹಾಗೆ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
Kannada BSI Bible 2016
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
Kannada Bible (KNCL) BSI 2016
ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!