Mark 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
Kannada BSI Bible 2016
ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಾಲ್ವತ್ತು ದಿವಸ ಅಡವಿಯಲ್ಲಿ ಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಡುವವನಾದನು; ಮತ್ತು ದೇವದೂತರು ಆತನಿಗೆ ಉಪಚಾರಮಾಡಿದರು.
Kannada Bible (KNCL) BSI 2016
ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.