Mark 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
Kannada BSI Bible 2016
ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನೂ ಸೀಮೋನನ ತಮ್ಮನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆಬೀಸುವದನ್ನು ಕಂಡನು. ಅವರು ಬೆಸ್ತರು.
Kannada Bible (KNCL) BSI 2016
ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.