Mark 1:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಬನ್ನಿರಿ, ನನ್ನನ್ನು ಹಿಂಬಾಲಿಸಿರಿ, ನಾನು ನಿಮ್ಮನ್ನು ಬೇರೆ ವಿಧದ ಬೆಸ್ತರನ್ನಾಗಿ ಮಾಡುವೆನು. ಇನ್ನು ಮೇಲೆ ನೀವು ಒಂದುಗೂಡಿಸುವುದು ಜನರನ್ನೇ, ಮೀನುಗಳನ್ನಲ್ಲ” ಎಂದು ಅವರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
Kannada BSI Bible 2016
ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ
Kannada Bible (KNCL) BSI 2016
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.