Mark 1:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ತಂದೆಯಾದ ಜೆಬೆದಾಯನೂ ಅವನ ಕೆಲಸಗಾರರೂ ಸಹೋದರರೊಂದಿಗೆ ದೋಣಿಯಲ್ಲಿದ್ದರು. ಯೇಸು ಅವರನ್ನು ಕರೆದನು. ಕೂಡಲೇ ಅವರು ತಮ್ಮ ತಂದೆಯನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
Kannada BSI Bible 2016
ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಕೂಡಲೆ ಇವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
Kannada Bible (KNCL) BSI 2016
ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.