Mark 1:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
Kannada BSI Bible 2016
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಉಪದೇಶಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶ ಮಾಡುತ್ತಿದ್ದನು.
Kannada Bible (KNCL) BSI 2016
ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.